• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಬೆಂಗಳೂರಲ್ಲಿ ಕಸ ವಿಲೇವಾರಿಗೆ ಹೊಸ ವಿಧಾನ: ಸಮೀಕ್ಷೆ ನಡೆಸಿ ಅಳವಡಿಕೆ; ಡಿಸಿಎಂ ಡಿ.ಕೆ. ಶಿವಕುಮಾರ್‌

Sambrama Prabha News by Sambrama Prabha News
December 10, 2025
in Politics
0
ಬೆಂಗಳೂರಲ್ಲಿ ಕಸ ವಿಲೇವಾರಿಗೆ ಹೊಸ ವಿಧಾನ: ಸಮೀಕ್ಷೆ ನಡೆಸಿ ಅಳವಡಿಕೆ; ಡಿಸಿಎಂ ಡಿ.ಕೆ. ಶಿವಕುಮಾರ್‌

Updated By: Priyalachhi

ಬೆಳಗಾವಿ: ಖಾತೆ ವಿಲೇವಾರಿಗೆ ತಂದಿದ್ದ ರೌಂಡ್‌ ರಾಬಿನ್‌ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಗೋಪಾಲಯ್ಯ ಅವರು ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ವ್ಯಾಪ್ತಿಯಲ್ಲಿ ಇ – ಖಾತೆಗಳನ್ನು ನೀಡಲು ತಂದಿರುವ ರೌಂಡ್‌ ರಾಬಿನ್‌ ಪದ್ದತಿಯಿಂದ ಅನಾನುಕೂಲವಾಗುತ್ತಿರುವುದು ಗಮನಕ್ಕೆ ಬಂದಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ಇ-ಖಾತೆ ಯೋಜನೆಯಡಿ ಜಿಬಿಎ ವ್ಯಾಪ್ತಿಯಲ್ಲಿ ಒಟ್ಟು 43,382 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 31,274 ಅರ್ಜಿಗಳನ್ನು ವಿಲೇ ಮಾಡಲಾಗಿದೆ. 5,448 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಡಿ.3ನೇ ತಾರೀಖಿನಿಂದಲೇ ಹಳೇ ಪದ್ದತಿಯಲ್ಲೇ ಖಾತೆ ಮಾಡಲು ನಿರ್ಧಾರ ಮಾಡಿರೋದಾಗಿ ತಿಳಿಸಿದರು.

ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು: ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಈ ಹಿಂದೆ ಮುಚ್ಚಿರುವ ಕಸ ಸಂಗ್ರಹಗಾರವನ್ನ ಸ್ಥಳಾಂತರಿಸಬೇಕು ಎನ್ನುವ ಶಾಸಕ ಧೀರಜ್‌ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಅವರು, ”ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ, ಗುಂದಲಹಳ್ಳಿಯಲ್ಲಿ ಒಟ್ಟು 134.10 ಎಕರೆ ಹಾಗೂ ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ಗೊಲ್ಲಹಳ್ಳಿಯಲ್ಲಿ 84.14 ಎಕರೆ ಹಾಗೂ 31.14 ಎಕರೆ ಪ್ರದೇಶವನ್ನು ನಿಗದಿಪಡಿಸಲಾಗಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 26 ಎಕರೆ ಪ್ರದೇಶದಲ್ಲಿ ವೈಜ್ಞಾನಿಕ ಕಸ ವಿಲೇವಾರಿ ಘಟಕವನ್ನು ಪ್ರಾರಂಭ ಮಾಡಲಾಗಿದೆ. ನಗರದ ನಾಲ್ಕು ಭಾಗದಲ್ಲೂ ವೈಜ್ಞಾನಿಕ ಕಸ ವಿಲೇವಾರಿ ಮಾಡಬೇಕು ಎಂದು ಪ್ರಯತ್ನ ಮಾಡುತ್ತಿರುವೆ. ಕಸದಿಂದ ಗ್ಯಾಸ್‌, ಬಯೋ ಗ್ಯಾಸ್‌ ಉತ್ಪಾದನೆ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದೇವೆ” ಎಂದರು.

Tags: ಡಿಸಿಎಂ ಡಿ.ಕೆ. ಶಿವಕುಮಾರ್
Previous Post

ಬುಧವಾರದ ಪಂಚಾಂಗ – ರಾಶಿ ಭವಿಷ್ಯ

Next Post

AI ಯುಗದಲ್ಲಿ ಭಾರತದ ಬಗ್ಗೆ ಜಗತ್ತು ಆಶಾವಾದಿಯಾಗಿದೆ: ಮೈಕ್ರೋಸಾಫ್ಟ್‌ನ $17.5 ಶತಕೋಟಿ ಹೂಡಿಕೆ ಸ್ವಾಗತಿಸಿದ ಪ್ರಧಾನಿ

Next Post
AI ಯುಗದಲ್ಲಿ ಭಾರತದ ಬಗ್ಗೆ ಜಗತ್ತು ಆಶಾವಾದಿಯಾಗಿದೆ: ಮೈಕ್ರೋಸಾಫ್ಟ್‌ನ $17.5 ಶತಕೋಟಿ ಹೂಡಿಕೆ ಸ್ವಾಗತಿಸಿದ ಪ್ರಧಾನಿ

AI ಯುಗದಲ್ಲಿ ಭಾರತದ ಬಗ್ಗೆ ಜಗತ್ತು ಆಶಾವಾದಿಯಾಗಿದೆ: ಮೈಕ್ರೋಸಾಫ್ಟ್‌ನ $17.5 ಶತಕೋಟಿ ಹೂಡಿಕೆ ಸ್ವಾಗತಿಸಿದ ಪ್ರಧಾನಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.