• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮಹತ್ವದ ಮಾಹಿತಿ ಬಹಿರಂಗಪಡಿಸಿದ ರಷ್ಯಾದ ರಾಯಭಾರಿ

Sambrama Prabha News by Sambrama Prabha News
April 1, 2026
in Nation News
0
ಮಹತ್ವದ ಮಾಹಿತಿ ಬಹಿರಂಗಪಡಿಸಿದ ರಷ್ಯಾದ ರಾಯಭಾರಿ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಟೆಹರಾನ್: ಇರಾನ್‌ನ ನೂತನ ಸರ್ವೋಚ್ಚ ನಾಯಕರಾಗಿ ಮೊಜ್ತಾಬಾ ಖಮೇನಿ ನೇಮಕವಾಗಿ ಸುಮಾರು ಒಂದು ತಿಂಗಳು ಕಳೆದಿದೆ. ಆದರೆ ಇಲ್ಲಿಯವರೆಗೂ ಸಾರ್ವಜನಿಕವಾಗಿ ಅವರು ಕಾಣಿಸಿಕೊಂಡಿಲ್ಲ. ಅಂದಿನಿಂದ ಅನೇಕ ಸಾರ್ವಜನಿಕ ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು, ಅದನ್ನು ರಾಷ್ಟ್ರೀಯ tv ಚಾನೆಲ್ ನಲ್ಲಿ ಪ್ರಸಾರ ಮಾಡಲಾಗಿದೆ.

ಆದರೆ ಎಲ್ಲಿಯೂ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ಇರುವುದು ಅವರ ಆರೋಗ್ಯ ಮತ್ತು ಎಲ್ಲಿದ್ದಾರೆ ಎಂಬ ವದಂತಿಗಳನ್ನು ಹುಟ್ಟುಹಾಕಿದೆ. ಈ ಊಹಾಪೋಹಗಳಿಗೆ ತೆರೆ ಎಳೆದಿರುವ ರಷ್ಯಾದ ರಾಯಭಾರಿಯೊಬ್ಬರು, ಮೊಜ್ತಾಬಾ ಖಮೇನಿ ಇರಾನ್‌ನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಮೊಜ್ತಾಬಾ ಖಮೇನಿ ಇರಾನ್ ನಲ್ಲಿಯೇ ಇದ್ದಾರೆ. ಆದರೆ ಅರ್ಥವಾಗುವ ಕಾರಣಗಳಿಗಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಇರಾನ್‌ನ ರಷ್ಯಾದ ರಾಯಭಾರಿ ಅಲೆಕ್ಸಿ ಡೆಡೋವ್ RTVI ಸುದ್ದಿವಾಹಿನಿಗೆ ತಿಳಿಸಿದ್ದಾರೆ.

ಯುದ್ಧದ ಆರಂಭದಲ್ಲಿ ಫೆಬ್ರವರಿ 28 ರಂದು ಯುಎಸ್-ಇಸ್ರೇಲಿ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ನಂತರ ಖಮೇನಿ ಅವರನ್ನು ಇರಾನ್ ನ ಸುಪ್ರೀಂ ಲೀಡರ್ ಆಗಿ ನೇಮಕ ಮಾಡಲಾಗಿತ್ತು. ಆದರೆ ಅವರು ಕೂಡಾ ದಾಳಿ ವೇಳೆ ಗಾಯಗೊಂಡಿದ್ದಾರೆ ಅಥವಾ ಸತ್ತಿದ್ದಾರೆ ಎಂದು ಅಮೆರಿಕ ಹೇಳುತ್ತಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೊಜ್ತಾಬಾ ಖಮೇನಿ ಅವರನ್ನು ಚಿಕಿತ್ಸೆಗಾಗಿ ಮಾಸ್ಕೋಗೆ ಕರೆದೊಯ್ಯಲಾಗಿದೆ ಎಂದು ಮಾಧ್ಯಮವೊಂದರ ವರದಿ ಹೇಳಿದೆ. ಕಳೆದ ವರ್ಷ ರಷ್ಯಾ ಮತ್ತು ಇರಾನ್ ಕಾರ್ಯತಂತ್ರದ ಪಾಲುದಾರಿಕೆ ಒಪ್ಪಂದಕ್ಕೆ ಸಹಿ ಹಾಕಿವೆ.

Tags: ರಷ್ಯಾ
Previous Post

ಪ್ರೀಮಿಯಂ ಪೆಟ್ರೋಲ್ ದರ, ಜೆಟ್ ಇಂಧನದ ಬೆಲೆ ಏರಿಕೆ

Next Post

ಇಂದು ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ

Next Post
ಇಂದು ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ

ಇಂದು ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.