BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್

Author Picture
Published On: January 13, 2026

—Advertisement—

Updated By: Priyalachhi 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಮತ್ತಿತರರು ಆರೋಪ ಎದುರಿಸುತ್ತಿರುವ ಮುಡಾ ಭೂಮಿ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ಬಿ-ರಿಪೋರ್ಟ್ (ಮುಗಿದ ವರದಿ) ಕುರಿತ ಆದೇಶವನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜನವರಿ 22 ಕ್ಕೆ ಕಾಯ್ದಿರಿಸಿದೆ.

ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಉಲ್ಲೇಖಿಸಿ ಬಿ-ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ದೂರುದಾರರಾದ ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದರು.

ಮಂಗಳವಾರ ಈ ಪ್ರಕರಣ ವಿಶೇಷ ನ್ಯಾಯಾಲಯದ ಮುಂದೆ ಬಂದಿತು. ಲೋಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕರಣದ ವಿವರವನ್ನು ಸಲ್ಲಿಸಿದರು.

ತನಿಖಾ ಸಂಸ್ಥೆಯ ಪರವಾಗಿ ವಾದಿಸಿದ ಲೋಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟೇಶ್ ಅರಬಟ್ಟಿ ಅವರು, ಲೋಕಾಯುಕ್ತ ಪೊಲೀಸರು ಒಟ್ಟು 70 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದ್ದು, ಈ ಪೈಕಿಯಾರೊಬ್ಬರೂ ಕೂಡ ಮುಖ್ಯಮಂತ್ರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಅಥವಾ ತನಿಖೆಯ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಹೇಳಿಕೆ ನೀಡಿಲ್ಲ. ತನಿಖಾಧಿಕಾರಿಗಳು ಎಲ್ಲಾ ಆಯಾಮಗಳಿಂದ ಪರಿಶೀಲಿಸಿ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp