• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Sambrama Prabha News by Sambrama Prabha News
February 4, 2026
in Politics
0
ವಿಬಿ-ಜಿ ರಾಮ್ ಜಿ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

Updated By: Priyalachhi

ಬೆಂಗಳೂರು: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸುವಂತೆ ಮತ್ತು ಯುಪಿಎ ಯುಗದ ಮನರೇಗಾವನ್ನು ಮರು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರ ಬುಧವಾರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನಸಭೆಯಲ್ಲಿ ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ನಿರ್ಣಯ ಮಂಡಿಸಿದ್ದರು.

“ಕರ್ನಾಟಕದ ಗ್ರಾಮೀಣ ಜನರ ಬದುಕುವ ಹಕ್ಕನ್ನು ರಕ್ಷಿಸುವ ದೃಷ್ಟಿಯಿಂದ, ಈ ಸದನವು ಕೇಂದ್ರ ಸರ್ಕಾರವನ್ನು ತಕ್ಷಣವೇ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್(ಗ್ರಾಮೀಣ) (ವಿಬಿ-ಗ್ರಾಮ್-ಜಿ) ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸುತ್ತದೆ ಎಂದು ಸಿಎಂ ಹೇಳಿದ್ದರು.

ವಿಬಿ-ಜಿ ರಾಮ್‌ ಜಿ ಕಾಯ್ದೆ ಫೆಡರಲ್ ತತ್ವಕ್ಕೆ ವಿರುದ್ಧವಾಗಿದೆ. ರಾಜ್ಯ ಖಜಾನೆಗೆ ತೀವ್ರ ಹೊರೆಯಾಗಿದೆ ಮತ್ತು ವಿಕೇಂದ್ರೀಕರಣದ ತತ್ವಕ್ಕೆ ವಿರುದ್ಧವಾಗಿದೆ. ಗ್ರಾಮ ಪಂಚಾಯತ್‌ಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಸಿಎಂ ಆಗ್ರಹಿಸಿದರು.

ಇಂದು ಸಹ ವಿಧಾನಸಭೆಯಲ್ಲಿ ನಿರ್ಣಯದ ಮೇಲೆ ಚರ್ಚೆ ಮುಂದುವರೆಯಿತು. ಆದರೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಭಾತ್ಯಾಗ ಮಾಡಿದರು.

Tags: ವಿಧಾನಸಭೆ
Previous Post

ಸಿದ್ದರಾಮಯ್ಯ ಸೇರಿ 139 ಶಾಸಕರೂ ನನ್ನ ಬಲ ಎಂದ DCM

Next Post

ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಸರ್ಕಾರ ಬಿಡುಗಡೆ ಮಾಡಬೇಕಾದ ಅನುದಾನದಲ್ಲೂ ಕಮಿಷನ್

Next Post
ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಸರ್ಕಾರ ಬಿಡುಗಡೆ ಮಾಡಬೇಕಾದ ಅನುದಾನದಲ್ಲೂ ಕಮಿಷನ್

ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಸರ್ಕಾರ ಬಿಡುಗಡೆ ಮಾಡಬೇಕಾದ ಅನುದಾನದಲ್ಲೂ ಕಮಿಷನ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.