Updated By: Priyalachhi
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ (Cricket)ನಲ್ಲಿ ಟೀಮ್ ಇಂಡಿಯಾ (Team India) ಸ್ಪೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ (Abhishek Sharma) ಇತಿಹಾಸ ಸೃಷ್ಟಿಸಿದ್ದಾರೆ. ಗಬ್ಬಾದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ 5ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ದಾಖಲೆ ಪುಸ್ತಕಗಳಲ್ಲಿ ಸಂಚಲನ ಮೂಡಿಸಿದ್ದಾರೆ. ಅಭಿಷೇಕ್ ಈಗ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 1000 ಟಿ20 ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಈ ಮೂಲಕ ವಿಶ್ವ ಕ್ರಿಕೆಟ್ನಲ್ಲಿ ಸ್ಟಾರ್ ಬ್ಯಾಟರ್ಸ್ ಹಿಂದಿಕ್ಕಿ ಅಭಿಷೇಕ್ ಶರ್ಮಾ ನಂಬರ್
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಭಿಷೇಕ್ ಶರ್ಮಾ 1000 ಟಿ20 ರನ್ ಗಳಿಸಲು ಕೇವಲ 528 ಎಸೆತಗಳನ್ನು ತೆಗೆದುಕೊಂಡಿದ್ದಾರೆ. ಇದುವರೆಗೆ ವಿಶ್ವದ ಯಾವೊಬ್ಬ ಬ್ಯಾಟರ್ ಕೂಡ ಇಷ್ಟು ಕಡಿಮೆ ಎಸೆತಗಳನ್ನು ತೆಗೆದುಕೊಂಡಿಲ್ಲ.



