BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

ಹಿಂದೂ ವೃದ್ಧ ಮಹಿಳೆಯೊಬ್ಬರಿಗೆ ಮನೆ ಕಟ್ಟಲು ನೆರವು ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮುಸ್ಲಿಂ ಮಹಿಳೆಯರು ಮನವಿ

Author Picture
Published On: May 19, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಉಡುಪಿ: ಹಿಂದೂ ವೃದ್ಧ ಮಹಿಳೆಯೊಬ್ಬರಿಗೆ ಮನೆ ಕಟ್ಟಲು ನೆರವು ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮುಸ್ಲಿಂ ಮಹಿಳೆಯರು ಮನವಿ ಮಾಡಿದ್ದರು. ಇದನ್ನು ಮುಂದಿಟ್ಟು ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬಿಜೆಪಿಗರಿಗೆ ಸೌಹಾರ್ದತೆಯ ಪಾಠ ಮಾಡಿದ್ದರು. ಆದರೆ ಇದೀಗ ಪ್ರಸಂಗ ಬದಲಾಗಿದೆ. ಉಸ್ತುವಾರಿ ಸಚಿವರನ್ನು ಭೇಟಿಯಾಗಲು ಬಂದ ಮಹಿಳೆ ಗಿರಿಜಾ ಶೆಟ್ಟಿಗಾರ್ ಅವರನ್ನು ಇಸ್ಲಾಂಗೆ ಮತಾಂತರಗೊಂಡಿದ್ದ ಪುತ್ರಿಯೇ ಕರೆತಂದಿದ್ದು ಎಂಬುದಾಗಿ ತಿಳಿದುಬಂದಿದೆ.

ಹಿಂದೂ ಮಹಿಳೆಯ ನೆರೆಮನೆಯವರು ಎಂದು ಸುಳ್ಳು ಹೇಳಿ ಉಸ್ತುವಾರಿ ಸಚಿವರನ್ನೇ ಬುರ್ಖಾಧಾರಿ ಮಹಿಳೆ ಯಾಮಾರಿಸಿದ್ದಾರೆ ಎಂದು ಆರೋಪಿಸಲಾಗಿದ್ದು ಇದೀಗ ಜಿಲ್ಲಾ ಬಿಜೆಪಿ ಮುಖಂಡರು ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಉಡುಪಿ ನಗರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು ಅವರು, ಸ್ವಂತ ತಾಯಿಯನ್ನೇ ನೆರೆಮನೆಯ ಮಹಿಳೆ ಎಂದು ಸಮಾಜಕ್ಕೆ ಸುಳ್ಳು ಹೇಳಿದ ಬುರ್ಖಾಧಾರಿ ಮಹಿಳೆಯರಿಂದ ಬಿಜೆಪಿಗರು ಸೌಹಾರ್ದತೆ ಕಲಿಯುವ ಅಗತ್ಯವಿಲ್ಲ. ಇನ್ನು ಅವಸರ ಬುದ್ಧಿಯ ಲಕ್ಷ್ಮಿ ಹೆಬ್ಬಾಳ್ಳರ್ ಅವರು ಹಿಂದೆ ಮುಂದೆ ಯೋಚಿಸದೇ ಮಾಧ್ಯಮದ ಮುಂದೆ ಉಡುಪಿ ಬಿಜೆಪಿಗರಿಗೆ ಸೌಹಾರ್ದತೆಯ ಭಾಷಣ ಮಾಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ ಎಂದರು.

5 ಸೆಂಟ್ಸ್ ಭೂಮಿಯ ದಾಖಲೆ ಸಮಸ್ಯೆಯಿಂದಾಗಿ ಮನೆ ಕಟ್ಟಲು ಸಾಧ್ಯವಾಗದ ಪ್ರಕರಣದಲ್ಲಿ ಹಿಂದೂ ಮಹಿಳೆಗಾಗಿ ಮುಸ್ಲಿಂ ಹೆಣ್ಣುಮಕ್ಕಳು ಕಣ್ಣೀರು ಹಾಕುತ್ತಿದ್ದಾರೆ ನೋಡಿ. ಉಡುಪಿ ಬಿಜೆಪಿಯವರು ಇದನ್ನು ನೋಡಿ ಸೌಹಾರ್ದತೆ ಕಲಿಯಬೇಕು ಅಂತ ಲಕ್ಷ್ಮಿ ಹೆಬ್ಬಾಳ್ಕರ್ ಚಾಟಿ ಬೀಸಿದ್ದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp