BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಹೊಸ ವರ್ಷಾಚರಣೆಯಂದು ಅಹಿತಕರ ಘಟನೆಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ

Author Picture
Published On: December 29, 2025

—Advertisement—

Updated By: Priyalachhi 

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು, ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು‌ ಎಂದು ಸೂಚಿಸಿದರು.

ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು. ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟ್ರೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮ ವಹಿಸಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು ಎಂದು ಹೇಳಿದರು.

3,500 ಡ್ರಿಂಕ್‌ ಆ್ಯಂಡ್‌ ಡ್ರೈವ್ ಪ್ರಕರಣ: ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದೆ. ಬೇರೆ ಜಿಲ್ಲೆಗಳಿಂದಲೂ 1,200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಹೆಚ್ಚಿನ ಸಂಖ್ಯೆಯ ಮಹಿಳಾ ಪೊಲೀಸರು ಹಾಗೂ ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜನೆ ಮಾಡಲಾಗುತ್ತದೆ. 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಅಂಬ್ಯುಲೆನ್ಸ್​​ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್‌ ಆ್ಯಂಡ್‌ ಡ್ರೈವ್ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಿಎಂಗೆ ಪೊಲೀಸ್​ ಅಧಿಕಾರಿಗಳು ಸಭೆಯಲ್ಲಿ ವಿವರಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp